ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.
ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವಾರವನ್ನು ಸೈದ್ಧಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾತ್ತಿದ್ದಾರೆ ಎಂಬದು ಸಾಕಷ್ಟು ವಿರೋಧ, ಆಕ್ಷೇಪ, ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.
ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ.ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು…
— Siddaramaiah (@siddaramaiah) December 1, 2024
“>
ಈ ಬೆನ್ನಲ್ಲೇ, ಊಹಾಪೋಹಗಳು, ಚರ್ಚೆಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ ಅವರು ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ‘ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.




