Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಭಾರೀ ಮಳೆ, ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಪೆಂಗಲ್ ಚಂಡ ಮಾರುತದ ಪರಿಣಾಮದಿಂದ ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಿನಾಂಕ 2/12/2024ರ ಸೋಮವಾರ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.

ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ