ಫೆಂಗಲ್ ಚಂಡಮಾರುತದಿಂದ ಎಲ್ಲೆಡೆ ಮಳೆ ಸುರಿಯುತ್ತಿರುವುದರಿಂದ ನಾಳೆ (ಡಿ.3)ಯೂ ಕೂಡ ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.
ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಹಾಗೂ ಡಿ.3ರಂದು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂಧ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಮಳೆಯ ಹಿನ್ನಲೆಯಲ್ಲಿ ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ದೊರೆಯಲಿದೆ. ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.





