Wednesday, November 18, 2026

ಪ್ರಾಯೋಗಿಕ ಆವೃತ್ತಿ

ವಿಶ್ವಚೇತನರನ್ನು ನಿಂದಿಸಬೇಡಿ ಗೌರವಿಸಿ: ನ್ಯಾ.ಮಹೇಂದ್ರ

ವಿಶ್ವಚೇತನರನ್ನು ನಿಂದಿಸುವುದನ್ನು ಬಿಟ್ಟು ಅವರನ್ನು ಗೌರವದಿಂದ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹೇಂದ್ರ ತಿಳಿಸಿದರು.

ಮಳವಳ್ಳಿ ಪಟ್ಟಣದ ಬಿಸಿಎಂ ಹಾಸ್ಟೆಲ್ ನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಬಿಸಿಎಂ ಮೆಟ್ರಿಕ್ ನಂತರ ಬಾಲಕರ ವೇಳೆ ವಿದ್ಯಾರ್ಥಿನಿಲಯ ವತಿಯಿಂದ ನಡೆದ ವಿಶ್ವ ಏಡ್ಸ್ ಮತ್ತು ವಿಶ್ವಚೇತನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಅವರು ದೇಶದಲ್ಲಿ ಏಡ್ಸ್ ಪ್ರಕರಣ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತಿದೆ ಇದಕ್ಕೆ ಕಾರಣ ಸರ್ಕಾರ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮೂಲಕ ನಮ್ಮ ಜನರಲ್ಲಿ ಅರಿವು ಮೂಡಿಸಿರುವುದರಿಂದ ಏಡ್ಸ್ ನ ರೋಗ ಲಕ್ಷಣಗಳು ಕಡಿಮೆಯಾಗಿದೆ ಎಂದರು

ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ ಕಾನೂನು ಬಗ್ಗೆ ಅರಿವು ಮುಖ್ಯ ಅದನ್ನು ತಿಳಿದುಕೊಳ್ಳಲು ಕಾನೂನು ಸೇವೆ ಸಮಿತಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಈ ವೇಳೆಯಲ್ಲಿ ಅಪರ ಸರ್ಕಾರಿ ವಕೀಲ ಶ್ರೀಕಂಠಸ್ವಾಮಿ ರವರು ಏಡ್ಸ್ ರೋಗದ ತಡೆಗಟ್ಟಲು ಯಾವ ಕ್ರಮ ಕೈಗೊಳ್ಳಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ತಾ.ಪಂ ಇಒ ಶ್ರೀನಿವಾಸ, ಬಿಸಿಎಂ ತಾಲ್ಲೂಕು ಕಲ್ಯಾಣಾಧಿಕಾರಿ ನಾಗರಾಜು,ವಕೀಲ ಸಂಘದ ಉಪಾಧ್ಯಕ್ಷ ಮಲ್ಲಪ್ಪ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ