Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದಮೂರ್ತಿ ನೇಮಕ

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್.ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯನ್ನಾಗಿ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತ (ಮಾರುಕಟ್ಟೆ)ರಾಗಿದ್ದ ಶಿವಾನಂದ ಮೂರ್ತಿಯವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ಹೆಚ್ ಎಲ್ ನಾಗರಾಜ್ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್ ಆದೇಶ ಹೊರಡಿಸಿದ್ದಾರೆ.

ಬಿ.ಸಿ.ಶಿವಾನಂದಮೂರ್ತಿಯವರು ಈ ಹಿಂದೆ ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ