ಮಂಡ್ಯದಲ್ಲಿ ಜರುಗುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಹಾರ ಎರಡನ್ನೂ ಕೊಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿಯು ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದೆ.
ಆಹಾರ ಮಹತ್ವದ ಕುರಿತು ಸಮ್ಮೇಳನದಲ್ಲಿ ಗೋಷ್ಠಿಯನ್ನು ಏರ್ಪಡಿಸಬೇಕೆಂದು , ಸಮ್ಮೇಳನದಲ್ಲಿ ಆಹಾರ ವ್ಯರ್ಥವಾಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಸಮಿತಿಯೂ ಸಮ್ಮೇಳನದಲ್ಲಿ ಮೊಟ್ಟೆ , ಕೋಳಿ ಮಾಂಸ ನೀಡುವ ಮೂಲಕ ಬಹುಜನರ ಆಹಾರ ಸಂಸ್ಕೃತಿಯನ್ನು ಗೌರವಿಸಬೇಕೆಂದು ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ಅವರಿಗೂ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಚನ ಉಮೇಶ್, ಮೈಸೂರಿನ ರೇವಣ್ಣ, ವೆಂಕಟಗಿರಿ, ಸಂಜಯ್ ಹಾಜರಿದ್ದರು.




