Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಮದ್ದೂರಿನ ಸೋಮನಹಳ್ಳಿಯಲ್ಲೇ ಎಸ್. ಎಂ. ಕೃಷ್ಣ ಅಂತ್ಯಕ್ರಿಯೆ

ಹಿರಿಯ ರಾಜಕೀಯ ಮುದ್ಸದ್ದಿ ಎಸ್ ಎಂ ಕೃಷ್ಣ ಅವರ ಪಾರ್ಥವ ಶರೀರದ ಅಂತ್ಯಕ್ರಿಯೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿಯಲ್ಲೇ ನೆರವೇರಲಿದೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ಸೂಚಿಸಿದೆ. ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು.

ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರವು ತಿಳಿಸಿದೆ.

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಂತ್ಯಕ್ರಿಯೆಯ ಸಿದ್ಧತೆಗಳ ಬಗ್ಗೆ  ಮಂಡ್ಯ ಜಿಲ್ಲಾಧಿಕಾರಿ ಡಾ:ಕುಮಾರ ಅವರು ಮದ್ದೂರು ತಾಲ್ಲೂಕು ಸೋಮನಹಳ್ಳಿ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂತ್ಯಕ್ರಿಯೆಯು ದಿನಾಂಕ  11-12-2024 ಬುಧವಾರ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮದ್ದೂರಿನ ತಾಲೂಕು ಶಾಸಕರು ಉದಯ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ