Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಡಿ.14ರಂದು ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಡಿಸೆಂಬರ್ 14 ಶನಿವಾರ  ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಡಿಸೆಂಬರ್ 14 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಾಗಮಂಗಲ ತಾಲೂಕಿನ ಕೋಟೆಬೆಟ್ಟದಲ್ಲಿ ಯಾತ್ರಿ ನಿವಾಸ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಚೀಣ್ಯ ಹೊಣಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮದ್ಯಾಹ್ನ 2 ಗಂಟೆಗೆ ನಾಗಮಂಗಲ ಟೌನ್ ನ ಬಡಗೂಡಮ್ಮ ದೇವಸ್ಥಾನದ ಆವರಣದ ಕಂದಾಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿರುವ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣಿ ಮತ್ತು ಪೋಡಿ ದಾಖಲೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5.30 ಗಂಟೆಗೆ ಮಂಡ್ಯ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಸಾಹಿತ್ಯ ಸಮ್ಮೇಳನ ನಡೆಯುವ ಆವರಣದಲ್ಲಿ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತೆಗಳ ಬಗ್ಗೆ ನಡೆಯುವ ಸಭೆಯಲ್ಲಿ ಭಾಗವಹಿಸುವರು.

ರಾತ್ರಿ 7.30 ಗಂಟೆಗೆ ಮದ್ದೂರು-ಚನ್ನಪಟ್ಟಣ-ಬಿಡದಿ ಮಾರ್ಗವಾಗಿ ಕೇಂದ್ರಸ್ಥಾನ ಬೆಂಗಳೂರಿಗೆ ತೆರಳಿಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ