Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಹೆಜ್ಜೇನು ದಾಳಿಗೆ ರೈತ ಬಲಿ

ಹೆಜ್ಜೇನು ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಜರುಗಿದೆ.

ಗ್ರಾಮದ 50 ವರ್ಷದ ನಿಂಗೇಗೌಡ ಬೆಳಿಗ್ಗೆ 9.30 ರ ಸಮಯದಲ್ಲಿ ಹಿಪ್ಪನೇರಳೆ ಸೊಪ್ಪು ಕೀಳಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಹಿಪ್ಪನೇರೆಳೆ ಸೊಪ್ಪು ಕೀಳುತ್ತಿದ್ದ ವೇಳೆ ಪಕ್ಕದ ಮರದಲ್ಲಿದ್ದ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿವೆ, ತಪ್ಪಿಸಿಕೊಂಡು ಓಡಿದರೂ ಬಿಡದೆ ಮುತ್ತಿಕೊಂಡು ದಾಳಿ ನಡೆಸಿದ ಪರಿಣಾಮ ನಿಂಗೇಗೌಡ ಸ್ಥಳದಲ್ಲೇ ಮೃತಪಟ್ಟರೆಂದು ವರದಿಯಾಗಿದೆ.

ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು ಎಂಬ ರೈತನ ಮೇಲೂ ಸಹ ಹೆಜ್ಜೇನುಗಳು ದಾಳಿ ಮಾಡಿದ ಪರಿಣಾಮ ಆತ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ನಿಂಗೇಗೌಡ ಅವರ ಶವವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯ
ಶವಾಗಾರ ಇಡಲಾಗಿದೆ.

ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ