Friday, November 20, 2026

ಪ್ರಾಯೋಗಿಕ ಆವೃತ್ತಿ

ಆಹಾರ ಸಮಾನತೆಗಾಗಿ ಹೋರಾಟ| ‘ಮನೆಗೊಂದು ಕೋಳಿ ಊರಿಗೊಂದು ಕುರಿ’ ಸಂಗ್ರಹ ಆರಂಭ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾಡಳಿತ ಸ್ಪಷ್ಟವಾಗಿ ವಿಚಾರ ತಿಳಿಸದಿರುವ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವವರಿಗೆ ಬಾಡೂಟ ನೀಡುವ ಉದ್ದೇಶದಿಂದ ಗುರುವಾರ ಬೆಳಿಗೆ ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ‘ ಮನೆಗೊಂದು ಕೋಳಿ ಊರಿಗೊಂದು ಕುರಿ’ ಅಭಿಯಾನವನ್ನು ಪ್ರಾರಂಭಿಸಲಾಯಿತು.

ಆಹಾರ ಸಮಾನತೆಗಾಗಿ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಕೆಂದು ಹಲವು ಪ್ರಗತಿಪರ ಸಂಘಟನೆಗಳ ಮುಖಂಡರು ಪಟ್ಟು ಹಿಡಿದಿದ್ದು, ಜಿಲ್ಲಾಡಳಿತ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದ ಕಾರಣ, ಮುಖಂಡರು ಕುರಿ ಕೋಳಿ ಸಂಗ್ರಹಕ್ಕೆ ಮುಂದಾಗಿದ್ದು, ಇಂದು ಸಂಜೆ 5 ಗಂಟೆಯ ವೇಳೆ ಜಿಲ್ಲಾಡಳಿತ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಹಳೇ ಬೂದನೂರು ಗ್ರಾಮದಲ್ಲಿ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಕೋಳಿಗಳು ಹಾಗೂ ಮೊಟ್ಟೆಗಳನ್ನು ನೀಡುವ ಮೂಲಕ ಆಹಾರ ಸಮಾನತೆಯ ಹೋರಾಟಕ್ಕೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಸಿ.ಕುಮಾರಿ, ಕರುನಾಡು ಸೇವಕರು ಸಂಘಟನೆ ಎಂ.ಬಿ.ನಾಗಣ್ಣಗೌಡ, ವಕೀಲರಾದ ಲಕ್ಷ್ಮಣ್ ಚೀರನಹಳ್ಳಿ, ಜೆ.ರಾಮಯ್ಯ, ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿಯ ಬೂದನೂರು ಸತೀಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ