Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ನಾಳೆ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ; ಸಿಎಂ ಸಿದ್ದರಾಮಯ್ಯ ಆಗಮನ

ಡಿ.20ರಿಂದ 23ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ (ಡಿ.20) ಬೆಳಿಗ್ಗೆ 7 ಗಂಟೆಗೆ ವಿದ್ಯುಕ್ತ ಚಾಲನೆ ದೊರೆಯಲಿದೆ.

ಡಿ.20ರಂದು ಬೆಳಿಗ್ಗೆ 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಪ್ರಾರಂಭವಾಗಿ ಮೈಸೂರು – ಬೆಂಗಳೂರು ರಸ್ತೆ ಮಾರ್ಗವಾಗಿ ಸ್ಯಾಂಜೋ ಆಸ್ಪತ್ರೆ ಹಾಗೂ ಹೋಟೆಲ್ ಅಮರಾವತಿ ಹಿಂಭಾಗ ಸಮ್ಮೇಳನದ ವೇದಿಕೆಗೆ ತಲುಪಲಿದೆ. ಮೈಸೂರು ಅರಮನೆಯ ರಾಜ ವಂಶಸ್ಥೆ ಪ್ರಮೋದಾದೇವಿ ಅವರು ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ಈ ಮೆರವಣಿಗೆಯಲ್ಲಿ 200 ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿದ್ದು, ಸಮ್ಮೇಳಾಧ್ಯಕ್ಷರ ಮೆರವಣಿಗೆ ವಿಶೇಷ ಮೆರಗು ನೀಡಲಿವೆ.

nudikarnataka.com

ಸಮ್ಮೇಳನ ಉದ್ಘಾಟಿಸಲಿರುವ ಸಿಎಂ

ಡಿಸೆಂಬರ್ 20 ರಂದು ಬೆಳಿಗ್ಗೆ 10.30 ಗಂಟೆಗೆ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭವು ಪ್ರಧಾನ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಸಂಸದ ಹೆಚ್. ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ದೊಡ್ಡ ರಂಗೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ.

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರು ಅಶೋಕ್ ಮಹದೇವಪ್ಪ ಪಟ್ಟಣ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ದೊಡ್ಡನಗೌಡ ಹನಮಗೌಡ ಪಾಟೀಲ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರುಗಳು ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ನ ಶಾಸಕರಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ವಿಧಾನಸಭಾ ಶಾಸಕರಾದ ಪಿ. ಎಂ. ನರೇಂದ್ರಸ್ವಾಮಿ, ಪಿ. ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್. ಟಿ. ಮಂಜು, ಕೆ. ಎಂ. ಉದಯ, ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ, ಮಂಡ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಅಧ್ಯಕ್ಷ ಕೆ. ಸಿ. ಜೋಗಿಗೌಡ, ಗೆಜ್ಜಲಗೆರೆಯ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಅಧ್ಯಕ್ಷ ಬಿ. ಬೋರೇಗೌಡ, ಬೂದನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಾನಸ, ಬೇಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸುವರ್ಣವತಿ, ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀಕಾಂತ್, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಆಗಮಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಮಂಜುಳಾ ಎನ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬು ಕುಮಾರ್, ಮೈಸೂರು ವಲಯದ ಐ.ಜಿ.ಪಿ ಡಾ. ಎಂ. ಬಿ. ಬೋರಲಿಂಗಯ್ಯ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ರಮೇಶ್ ಡಿಎಸ್, ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕಿ ಡಾ. ಕೆ. ಧರಣೀದೇವಿ ಅವರುಗಳು ಆಗಮಿಸಲಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ