ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.
ಸುವರ್ಣ ಸೌಧದಲ್ಲೇ ಧರಣಿ ಕುಳಿತಿದ್ದ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದ ಪೊಲೀಸರು, ಜೀಪಿನಲ್ಲಿ ಹತ್ತಿಸಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ‘ಸಿ.ಟಿ. ರವಿ ಅವರು ತಮ್ಮ ಕಡೆಗೆ ನುಗ್ಗಿ ಬಂದು ಸುಮಾರು 10 ಬಾರಿ ಆ ಆಕ್ಷೇಪಾರ್ಹ’ ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗ ಮಾಡಿದ್ದಾರೆ’ ಎಂದೂ ದೂರಿನಲ್ಲಿ ತಿಳಿಸಲಾಗಿದೆ




