Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಮಿತ್ ಶಾ ಬೇಷರತ್ ಕ್ಷಮೆಯಾಚಿಸಲಿ ; ನರೇಂದ್ರಸ್ವಾಮಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರ ಕುರಿತು ಲಘುವಾಗಿ ಆಡಿರುವ ಮಾತುಗಳು ಕೀಳುಮಟ್ಟದಿಂದ ಕೂಡಿದ್ದು, ಅವರು ಯಾವ ರೀತಿಯ ರಾಜಕೀಯ ನೀತಿ ಅನುಸರಿಸುತ್ತಿದ್ದಾರೆಂಬುದಕ್ಕೆ ಸಾಕ್ಷಿಯಾಗಿದೆ, ಹಾಗಾಗಿ ಅಮಿತ್ ಶಾ ಬೇಷರತ್ ಕ್ಷಮೆಯಾಚಿಸಬೇಕೆಂದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಒತ್ತಾಯಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದ ಸಮಯದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ದೇಶದ ಜನರ ಭಾವನೆಗಳನ್ನು ಕೆರಳಿಸಿ, ಶಾಂತಿ ಕದಡುವ ಪ್ರಯತ್ನದ ಕೃತ್ಯ ಎಸಗಿರುವ ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ದ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿ, ಅವರು ಮಾತನಾಡಿದರು.

ಅಮಿತ್ ಶಾ ವಿರುದ್ಧ ದೌರ್ಜನ್ಯ ಪ್ರಕರಣವನ್ನು ಅವರ ಮೇಲೆ ದಾಖಲಿಸಿ ಮತ್ತು ಅವರು ಬಳಸಿರುವ ಭಾಷೆಗೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಾತನಾಡಿ, ಸಂಸತ್ ಅಧಿವೇಶನ ನಡೆಯುತ್ತಿದ್ದ ವೇಳೆ ವಿರೋಧ ಪಕ್ಷವನ್ನು ಟೀಕಿಸುವ ಬರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾಂಗ್ರೆಸ್ ನವರು ಮತ್ತು ಅವರ ಅನುಯಾಯಿ ಗಳು ಅಂಬೇಡ್ಕರ್ ವ್ಯಸನಿಗಳಾಗಿದ್ದಾರೆ ಎಂದು ಅಂಬೇಡ್ಕರ್ ರವರ ಹೆಸರನ್ನು ವ್ಯಸನ ಎಂಬ ಪದಕ್ಕೆ ಹೋಲಿಕೆ ಮಾಡಿ ಮಾತನಾಡಿರುವುದು ಭಾರತದ ಮಹಾ ನಾಯಕರೊಬ್ಬರ ಶ್ರೇಷ್ಠತೆಗೆ ಧಕ್ಕೆ ಉಂಟಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಸುಂಡಹಳ್ಳಿ ಸಿದ್ದರಾಜು, ಪ್ರಾಣೇಶ್, ಕುಮಾರಸ್ವಾಮಿ, ದೀಪಕ್, ದೇವರಾಜು, ಶಿವಾನಂದ ಮೂರ್ತಿ,ಲವ, ಕೊತ್ತತ್ತಿ ಮಹದೇವು, ನಿತ್ಯಾನಂದ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ