Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಲಾರಿ – ಕಾರು ನಡುವೆ ಭೀಕರ ಅಪಘಾತ ; ಮೂವರ ದುರ್ಮರಣ

ಮಳವಳ್ಳಿ ತಾಲ್ಲೂಕಿನ ನಾಗೇಗೌಡನ ದೊಡ್ಡಿ ಬಳಿ ನಡೆದ ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಮೂಲತಃ ಚಿತ್ರದುರ್ಗದವರಾದ ಅಕಾಶ್, ಶಶಾಂಕ್ ಹಾಗೂ ಆರ್ದಶ ಎಂಬ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ಬೆಂಗಳೂರಿನಿಂದ ದೇವಸ್ಥಾನವೊಂದಕ್ಕೆ  ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿ ಈ ದುರ್ಘಟನೆ ನಡೆದಿದೆ, ಈ ಮೂವರ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲ ವ್ಯಾಸಂಗ ಮಾಡುತ್ತಿದ್ದರು. ಓರ್ವ ವಿದ್ಯಾರ್ಥಿಗೆ ಗಾಯಗೊಂಡಿತು ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತರ ಶವಗಳನ್ನು ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ