Friday, November 20, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರಿನಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ: ಶಿವಲಿಂಗಯ್ಯ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಡಿಸೆಂಬರ್ 28 ಮತ್ತು 29ರಂದು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಬೆಂಗಳೂರು ಯಲಹಂಕ ತಾಲೂಕಿನ ಬಾಗಲೂರಿನಲ್ಲಿರುವ ವಿ.ಜೆ.ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಬೆಳಿಗ್ಗೆ 8ಕ್ಕೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ತಿನ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆಯ ಕಾರ್ಯಕ್ರಮ ನಡೆಯಲಿದೆ, ಬೆಳಿಗ್ಗೆ 9ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯುವುದು ಎಂದರು.

ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸುವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಸಮ್ಮೇಳನಾಧ್ಯಕ್ಷರ ನುಡಿ ನುಡಿವರು, ಚಲನಚಿತ್ರ ನಟಿ, ರಂಗ ಕರ್ಮಿ ಹಾಗೂ ವಿಧಾನಪರಿಷತ್ ಸದಸ್ಯೆ ಸಮ್ಮೇಳನಾಧ್ಯಕ್ಷ ನುಡಿ ನುಡಿವರು, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ವಿಜ್ಞಾನ ವಸ್ತು ಪ್ರದರ್ಶನ ಅನಾವರಣ ಮಾಡುವರು ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ವೈಜ್ಞಾನಿಕ ದಿನಚರಿ 2025ನ್ನು ಬಿಡುಗಡೆ ಮಾಡುವರು, ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್‌ದಾಸ್ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ಪ್ರಧಾನ ಮಾಡುವರು, ಆಹಾರ ಮತ್ತು ನಾಗರಿಕ ಸಚಿವ ಕೆ.ಹೆಚ್.ಮುನಿಯಪ್ಪ ಜ್ಞಾನಸಿರಿ-2020 ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು, ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಪ್ಲಾನಿಟೋರಿಯಂ ಪ್ರದರ್ಶನ ಉದ್ಘಾಟನೆ ಮಾಡುವರು, ಶಾಸಕ ಎಸ್.ಆರ್.ವಿಶ್ವನಾಥ್ ೨೦೨೫ರ ಕ್ಯಾಲೆಂಡರ್ ಬಿಡುಗಡೆ ಮಾಡುವರು, ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಸಮ್ಮೇಳನಾಧ್ಯಕ್ಷರ ಪರಿಚಯ ಪುಸ್ತಕ ಬಿಡುಗಡೆ ಮಾಡಲಿದ್ದು, ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಮಧ್ಯಾಹ್ನ 2.30ಕ್ಕೆ ನಮ್ಮ ಸಂವಿಧಾನ ನಮ್ಮ ಹಕ್ಕು ವಿಷಯವಾಗಿ, ಸಂಜೆ 4ಕ್ಕೆ ಪ್ರಸ್ತುತ ರೈತರ ಬವಣೆಗಳು ವಿಷಯವಾಗಿ ಗೋಷ್ಠಿಗಳು ನಡೆಯಲಿವೆ. ಸಂಜೆ 6ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಂಜೆ 7ಕ್ಕೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಲಿವೆ. ಡಿಸೆಂಬರ್ 29ರಂದು ಬೆಳಿಗ್ಗೆ 9ಕ್ಕೆ ವಿಶ್ವ ಮಾನವ ಕುವೆಂಪು ವೇದಿಕೆಯಲ್ಲಿ ಪರಿಷತ್ತಿನ ಮಹಾಧಿವೇಶನ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ವಿಶ್ವಮಾನವ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಪ್ರಮಾಣ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಸ್ತ್ರೀ ಮನದ ತಲ್ಲಣಗಳು ವಿಚಾರ ಗೋಷ್ಠಿ, ಮಧ್ಯಾಹ್ನ 2ಕ್ಕೆ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿ ಪ್ರಧಾನ ಸಮಾರಂಭ, ಸಂಜೆ 3.30ಕೆಕ ಮಹಿಳಾ ಸಾಧಕರಿಗೆ ರಾಜ್ಯ ಮಟ್ಟದ ಚೈತನ್ಯಶ್ರೀ ಪ್ರಶಸ್ತಿ ಪ್ರದಾನ, ಸಂಜೆ 5ಕ್ಕೆ ಸಮಾರೋಪ ಸಮಾರಂಭ, ಸಂಜೆ 6.30ಕ್ಕೆ ಸಾಂಸ್ಕೃತಿಕ ಸಂಜೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕೆಂಪರಾಜು , ಉಪಾಧ್ಯಕ್ಷ ಗುರುಮೂರ್ತಿ, ಸಂಘಟನಾ ಕಾರ್ಯದರ್ಶಿ ವಸಂತಮ್ಮ, ದೊಡ್ಡಲಿಂಗರಾಜು, ಖಜಾಂಚಿ ಜಯರಾಂ, ನಿರ್ದೇಶಕ ವೆಂಕಟಾಚಲಯ್ಯ, ಮಹೇಂದ್ರ, ಜಯರಾಮು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ