ಜಾತಿನಿಂದನೆ ಹಾಗೂ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇತ್ತೀಚಿಗೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಏಟು ನೀಡಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರು ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ. ಬಳಿಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟೇಡಿಯಂ ಬಳಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
A group of miscreants threw eggs at #BJP MLA #Muniratna during a BJP programme of celebrating the birth anniversary of #Vajpayee in Bengaluru. Police have detained 3 persons in connection with the incident.Muniratna alleges congress workers attacked him,police are investigating pic.twitter.com/SiBgyaKnTJ
— Yasir Mushtaq (@path2shah) December 25, 2024
“>
ಈ ವೇಳೆ ಕಾಂಗ್ರೆಸ್ ಬೆಂಬಲಿಗರು ಕೂಡಾ ಪ್ರತಿಭಟನೆ ನಡೆಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕಾರು ಜಖಂಗೊಳಿಸಿರುವ ಆರೋಪವೂ ಕೇಳಿಬಂದಿದೆ. ಪ್ರತಿಭಟನೆ ವೇಳೆಯಲ್ಲಿ 2-3 ಕಾರುಗಳ ಜಖಂಗೊಂಡಿದ್ದು, ಕೆಲ ಮಂದಿಗೆ ಹಲ್ಲೆಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.




