Friday, November 20, 2026

ಪ್ರಾಯೋಗಿಕ ಆವೃತ್ತಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಇನ್ನೂ ಎರಡು ದಿನ 15 ಜಿಲ್ಲೆಗಳಲ್ಲಿ ಮಳೆ

ಬಂಗಾಳ ಕೊಲ್ಲಿ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾರದಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 26 ಹಾಗೂ 27 ರಂದು ಅಲ್ಲಲ್ಲಿ ಹಗುರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನ 17 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಇಂದು ಮತ್ತು ನಾಳೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ ಸುಮಾರು 25 ಡಿಗ್ರಿ ಸೆಂಟಿಗ್ರೇಡ್ ಹಾಗೂ ಜನಿಷ್ಠ ಉಷ್ಣಾಂಶ 19 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ಸಿಎಸ್ ಪಾಟೀಲ್ ಹೇಳಿದ್ದಾರೆ.

ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದ ಅಲ್ಲಲ್ಲಿ ಮಳೆ ಆಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೆಳಗ್ಗಿನ ಜಾವ ಮಂಜು ಮುಸುಕಿದ ವಾತಾವರಣ ಹಾಗೂ ಕೆಲ ಪ್ರದೇಶಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಂಜು ಕವಿದ ವಾತಾವರಣ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ , ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ ಹಾಗೂ ಬಲ್ಳಾರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೆಳಗ್ಗಿನ ಜಾವ ಮಂಜು ಮುಸುಕಿದ ವಾತಾವರಣ ಹಾಗೂ ಕೆಲ ಪ್ರದೇಶಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಂಜು ಕವಿದ ವಾತಾವರಣ ಇರಲಿದೆ.

ರಾಜ್ಯದಲ್ಲಿ ಜನವರಿ 7 ರವರೆಗೂ ಮಳೆ ಇರುವುದಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಶುಷ್ಕ ವಾತಾವರಣ ಅಥವಾ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ವಾರಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ದಾಖಲೆಯ ಪ್ರಮಾಣದಲ್ಲಿ ಚಳಿ ಇತ್ತು, ದಶಕದ ಕನಿಷ್ಠ ತಾಪಮಾನ ದಾಖಲಾಗಿ, ಜನ ಚಳಿಯಿಮದ ಗಡಗಡ ನಡುಗುವಂತಾಗಿತ್ತು. ಇದೀಗ ಮಧ್ಯೆ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಿಂದಾಗಿ ವಾತಾವರಣದಲ್ಲಿ ಚಳಿಯ ಪ್ರಮಾಣ ಕಡಿಮೆ ಆಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ