Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಅಗಲಿದ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ

ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಕೆಲ ನಿಮಿಷ ಮೌನ ಆಚರಣೆ ನಡೆಸಲಾಯಿತು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು ಮಾತನಾಡಿ, ದೇಶ ಆರ್ಥಿಕವಾಗಿ ದುಸ್ಥಿತಿಯಲ್ಲಿದ್ದಾಗ ಆರ್ಥಿಕ ತಜ್ಞರಾಗಿ ಕೇಂದ್ರದಲ್ಲಿ ಉತ್ತಮ ಆಡಳಿತ ನಡೆಸಿದ ಮಹಾನ್ ವ್ಯಕ್ತಿ ಇವರನ್ನು ಕಳೆದುಕೊಂಡು ದೇಶಕ್ಕೆ ನಷ್ಠವಾಗಿದೆ ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಕಾರ್ಯಾಧ್ಯಕ್ಷ ಶಿವಮಾದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ತಾ.ಅಧ್ಯಕ್ಷ ಮಾದೇಶ, ಮನ್ ಮುಲ್ ನಿರ್ದೇಶಕ ವಿಶ್ವಾಸ, ಪುರಸಭೆ ಸದಸ್ಯ ಶಿವಸ್ವಾಮಿ.ಬಸವರಾಜು. ಆನಂದ್.ಮಾಜಿ ಅಧ್ಯಕ್ಷ ದೇವರಾಜು, ಮುಖಂಡರಾದ ರಾಮಚಂದ್ರಗೌಡ.ಮಾದು.ಕೃಷ್ಣೇಗೌಡ,ಕಿರಣ್ ಶಂಕರ್ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ