Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ| ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ನಟ ವಿಜಯ್

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿರುವ ನಟ- ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಬೇಡಿಕೆಗಳನ್ನು ಸಲ್ಲಿಸಿದ್ದೇವೆ. ಎಲ್ಲೆಡೆ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳು, ಫಂಜಾಲ್ ಚಂಡಮಾರುತದ ಪರಿಹಾರಕ್ಕಾಗಿ ಕೇಂದ್ರದ ಹಣವನ್ನು ಬಿಡುಗಡೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಕ್ಷದ ವರಿಷ್ಠರು ಒತ್ತಾಯಿಸಿದ್ದಾರೆ ಎಂದು ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್.ಆನಂದ್ ತಿಳಿಸಿದ್ದಾರೆ.

ತಮ್ಮ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ಪ್ರೀತಿಯ ಸಹೋದರಿಯರೇ” ಎಂದು ಬರೆದಿರುವ ಕೈಬರಹದ ಪತ್ರದಲ್ಲಿ, “ನಮ್ಮನ್ನು ನಿಯಂತ್ರಿಸುವವರಿಗೆ ನಾವು ಎಷ್ಟು ಬಾರಿ ಕೇಳಿದರೂ ಕೇಳುವುದು ವ್ಯರ್ಥ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಪ್ರತಿದಿನ ಮಹಿಳೆಯರ ಮೇಲೆ ಸಾಮೂಹಿಕ ದೌರ್ಜನ್ಯಗಳು, ಅವ್ಯವಸ್ಥೆಯ ನಡವಳಿಕೆ ಮತ್ತು ಲೈಂಗಿಕ ಅಪರಾಧಗಳಿಗೆ ಬಲಿಯಾಗುತ್ತಾರೆ. ಅವರ ಸಹೋದರನಾಗಿ ನಾನು ಅವರ ದುಃಖವನ್ನು ನೋಡಿದ ನಂತರ ಖಿನ್ನತೆ ಮತ್ತು ವರ್ಣನಾತೀತ ನೋವು ಅನುಭವಿಸುತ್ತಿದ್ದೇನೆ. ನಿಮ್ಮ ಬೆಂಬಲಕ್ಕೆ ನಿಂತು ನಿಮ್ಮನ್ನು ಸಹೋದರನಂತೆ ರಕ್ಷಿಸುತ್ತೇನೆ ಎಂದು ವಿಜಯ್ ಭರವಸೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ