Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಸಕ ರವಿಕುಮಾರ್ ಜನ್ಮದಿನ : ವಿಶೇಷ ಪೂಜೆ; ಉಪಾಹಾರ ವಿತರಣೆ

ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಗೌಡವರ 44ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಭೂ ನ್ಯಾಯ ಮಂಡಳಿ ಸದಸ್ಯ ಅರುಣ್ ನೇತೃತ್ವದಲ್ಲಿ ಇಂದು ಮಂಗಳವಾರ ಬೆಳಿಗ್ಗೆ 7 ಗಂಟೆಗೆ ವಿದ್ಯಾನಗರದ ಗಣಪತಿ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅರ್ಚನೆ, ಅಭಿಷೇಕ ಮತ್ತು ಸಿಹಿ ವಿತರಣೆ ಮಾಡಲಾಯಿತು.

ಬೆಳಿಗ್ಗೆ 8:30 ಕ್ಕೆ ವಿಕಸನ ಜೋಗುಳ ದತ್ತು ಕೇಂದ್ರದ ಮಕ್ಕಳಿಗೆ ತಿಂಡಿ, ಹಣ್ಣು ಮತ್ತು ಸಿಹಿ ವಿತರಣೆ ಮಾಡಲಾಯಿತು. ಮಧ್ಯಾಹ್ನ ಕೆಂಪೇಗೌಡ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಶಾಸಕ ರವಿಕುಮಾರ್ ಹೆಸರಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ರಾತ್ರಿ 7.30 ಕ್ಕೆ ವಿಕಸನ ಜೋಗುಳ ದತ್ತು ಕೇಂದ್ರದ ಮಕ್ಕಳಿಗೆ ಒಬ್ಬಟ್ಟು, ಹೋಳಿಗೆ ಊಟವನ್ನು ಏರ್ಪಡಿಸಲಾಗಿದೆ, ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಅಧ್ಯಕ್ಷರು, ಕಾರ್ಯಕರ್ತರು, ರವಿಕುಮಾರ್ ಯುವ ಬ್ರಿಗೇಡ್ ನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಯುವ ಮುಖಂಡ ಅರುಣ್ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ