Friday, November 20, 2026

ಪ್ರಾಯೋಗಿಕ ಆವೃತ್ತಿ

ಕಸಾಪ ಅಧ್ಯಕ್ಷ ಜೋಶಿಗೆ ಮತ್ತೊಮ್ಮೆ ಮುಖಭಂಗ| ಮುದ್ದೇಗೌಡ ಆಯ್ಕೆಗೆ ಹೈಕೋರ್ಟ್ ತಡೆಯಾಜ್ಞೆ

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮುದ್ದೇಗೌಡ ಅವರನ್ನು ನಾಮ ನಿರ್ದೇಶನ ಮಾಡಿ ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಒಂದಲ್ಲ ಒಂದು ವಿವಾದದಲ್ಲಿ ತೊಡಗಿರುವ ಮಹೇಶ್ ಜೋಶಿ ಅವರಿಗೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.

ಡಾ. ಎಚ್.ಎಸ್. ಮುದ್ದೇಗೌಡರನ್ನು ಮಂಡ್ಯ ಜಿಲ್ಲಾ ಅಧ್ಯಕ್ಷರು ಎಂದು ಘೋಷಿಸಿದ ಅದೇಶದ ವಿರುದ್ದ ಮಂಡ್ಯ ಜಿಲ್ಲಾ ಕಸಾಪ ಪದಾಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು, ಮುದ್ದೇಗೌಡರ ಆಯ್ಕೆ ಪ್ರಕ್ರಿಯೆಯಲ್ಲಿ ಬೈಲಾದ ನಿಬಂಧನೆಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಡಿ.31ರಂದು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಎಂದು ಮಂಡ್ಯ ತಾಲ್ಲೂಕು ಕಸಾಪ ಅಧ್ಯಕ್ಷ ಚಂದ್ರಲಿಂಗು ಮಂಡ್ಯದಲ್ಲಿ ಸುದ್ದಿಗೋಷ್ಠಿ ವಿವರಿಸಿದರು.

ಉಚ್ಚ ನ್ಯಾಯಾಲಯ ತಡೆಯಾಜ್ಞೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಈ ಮೊದಲಿನಿಂದಲೂ ಇರುವ ಕಾರ್ಯಕಾರಿ ಸಮಿತಿ ಎಂದಿನಂತೆ ಕಾರ್ಯ ಮುಂದುವರೆಸಿಕೊಂಡು ಹೋಗಲಿದೆ ಎಂದು ತಿಳಿಸಿದರು.

nudikarnataka.com

ಸಮ್ಮೇಳನ ಯಶಸ್ವಿಗೆ ಧನ್ಯವಾದ

2024 ಡಿಸೆಂಬರ್ 20, 21, 22ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿಯವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು, ನಾಡಿನ ಎಲ್ಲಾ ಕನ್ನಡಾಭಿಮಾನಿಗಳು, ಸಮ್ಮೇಳನಕ್ಕಾಗಿ ರಚಿಸಲಾಗಿದ್ದ ಎಲ್ಲಾ ಸಮಿತಿಗಳ ಪದಾಧಿಕಾರಿಗಳು, ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳು, ಕಲಾವಿದರು, ಜನಸಾಮಾನ್ಯರು, ಮಾಧ್ಯಮ ಮಿತ್ರರು ಹಾಗೂ ಎಲ್ಲರ ಸಹಕಾರದಿಂದ ಸಮ್ಮೇಳನವು ವಿಜೃಂಭಣೆಯಿಂದ ಯಶಸ್ವಿಗೊಂಡಿದೆ. ಆದ್ದರಿಂದ ಈ ಮೂಲಕ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಮಳವಳ್ಳಿ ತಾಲ್ಲೂಕು ಕಸಾಪ ಅಧ್ಯಕ್ಷ ಚೇತನ್, ಪಾಂಡವಪುರ ತಾಲ್ಲೂಕು ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ಪದಾಧಿಕಾರಿಗಳಾದ ಅಂಜನಾ ಶ್ರೀಕಾಂತ್, ಸುವರ್ಣಾವತಿ, ಪ್ರಮೀಳಾ ಹಾಗೂ ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ