Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜ.4ರಂದು ಪ್ರೊ.ಎಚ್ಚೆಲ್ಕೆ ವೈಚಾರಿಕ ಪ್ರಶಸ್ತಿ ಪ್ರದಾನ

ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದ ವತಿಯಿಂದ 7ನೇ ವರ್ಷದ ಪ್ರೊ.ಎಚ್ಚೆಲ್ಕೆ ವೈಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 4ರ ಬೆಳಿಗ್ಗೆ 10.30ಕ್ಕೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಕೆ.ರಾಜೇಂದ್ರ ಪ್ರಸಾದ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಅಧ್ಯಕ್ಷ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಹಾಗೂ ಲೇಖಕರೂ ಆದ ಸಿದ್ದನಗೌಡ ಪಾಟೀಲ ಅವರಿಗೆ ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್.ವಿಶುಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ಪುರಸ್ಕೃತರ ಕುರಿತು ಕನ್ನಡ ಪ್ರಾಧ್ಯಾಪಕಿ ಹಾಗೂ ವಿಮರ್ಶಕಿ ಎಂ.ಎಸ್.ಆಶಾದೇವಿ ಮಾತನಾಡುವರು  ಎಂದರು.

ಪ್ರತಿಷ್ಠಾನದ ಟ್ರಸ್ಟಿ ಕೆ.ಬೋರಯ್ಯ ಮಾತನಾಡಿ, ಪ್ರೊ.ಎಚ್.ಎಲ್.ಕೇಶವಮೂರ್ತಿ ಅವರ ಕೊನೆಯ ಪುಸ್ತಕ ‘ಎಲ್ಲಾ ಶ್ರೀಮಾನ್‌ಗಳು 420ಗಳೇ’ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ರೈತ ಮುಖಂಡ ಮುದ್ದೇಗೌಡ, ದಲಿತ ಮುಖಂಡ ಎಂ.ವಿ.ಕೃಷ್ಣ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ