Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಹಣ ವಸೂಲಿ ಆರೋಪ ; KRS ಠಾಣೆಯ ಮೂವರು ಪೊಲೀಸರ ಅಮಾನತು

ಹೊರರಾಜ್ಯಗಳಿಂದ ಪ್ರವಾಸಕ್ಕೆ ಬರುವ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಠಾಣೆಯ ಮುಖ್ಯಪೇದೆ ಸೇರಿದಂದಂತೆ ಮೂವರನ್ನು ಅಮಾನತುಗೊಳಿಸಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಮುಖ್ಯಪೇದೆ ಪುರುಷೋತ್ತಮ್, ಪೇದೆಗಳಾದ ಅನಿಲ್ ಕುಮಾರ್ ಹಾಗೂ ಪ್ರಭಸ್ವಾಮಿ ಅಮಾನತುಗೊಂಡವರು.

ಇವರು ಕೆ.ಅರ್.ಎಸ್ ಅಣೆಕಟ್ಟೆ ಸೇರಿದಂತೆ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಬರುವ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಕೆಲವು ಸಾರ್ವಜನಿಕರು ವೀಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಅಲ್ಲದೇ ಈ ಬಗ್ಗೆ ಸಾರ್ವಜನಿಕರು ಸಹ ಹಿರಿಯ ಪೋಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ