Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬೇಲೂರು ಪ್ರೌಢಶಾಲೆಯಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಣೆ

ಮಂಡ್ಯ ತಾಲೂಕು ದಕ್ಷಿಣ ವಲಯ ಬೇಲೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಅಕ್ಷರದ್ವ  ಸಾವಿತ್ರಿಬಾಯಿ ಪುಲೆ ಅವರ 194ನೇ ಜನ್ಮ ಅರ್ಥಪೂರ್ಣವಾಗಿ ಆಚರಿಸಲಾಯಿತು..

ಶಾಲೆಯ ಮುಖ್ಯ ಶಿಕ್ಷಕಿ ಕೆಎಂ ಪವಿತ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಆದಂತಹ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ ಸಂಪೂರ್ಣ ಮಾಹಿತಿಯನ್ನ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರು.

ಶಾಲಾ ಶಿಕ್ಷಕ ವೃಂದದವರು ಹಾಗೂ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್  ಗೈಡ್ಸ್ ಮಕ್ಕಳು ಭಾಗವಹಿಸಿದ್ದರು.ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರೀರಕ್ಷ ಬಿ.ಎಂ ಅವರು ಸಾವಿತ್ರಿಬಾಯಿ ಪುಲೆ ಅವರ ಜೀವನ ಚರಿತ್ರೆಯನ್ನು ತಿಳಿಸಿದರು.

ಕಾರ್ಯಕ್ರಮವನ್ನು ಗೈಡ್ ಕ್ಯಾಪ್ಟನ್ ಉಷಾರಾಣಿ ನಿರ್ವಹಿಸಿದ್ದರು..

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ