Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಕಾಂಗ್ರೆಸ್ ಪಕ್ಷದಿಂದ ತಮಟೆ ಚಳವಳಿ ಪ್ರತಿಭಟನೆ

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಒಕೊಂಡು ಬಿಜೆಪಿ ಮಾಡುತ್ತಿರುವ ಆರೋಪವನ್ನು ಖಂಡಿಸಿ ನಾಳೆ (ಜ.4) ಬೆಳಿಗ್ಗೆ 10.30 ಗಂಟೆಗೆ ಮಂಡ್ಯನಗರದ ಸಂಜಯ ಸರ್ಕಲ್ ನಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮಟೆ ಚಳವಳಿ ನಡೆಸಲಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತ ದ್ವೇಷ ರಾಜಕಾರಣ ಮಾಡುತ್ತಿರುವ ಆರ್ ಎಸ್ ಎಸ್ ಮತ್ತು ಬಿ ಜೆ ಪಿ ನಾಯಕರ ವಿರುದ್ದ ನಡೆಯುವ ಪ್ರತಿಭಟನೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಿಯಾಂಕ್ ಖರ್ಗೆ ಹಿತೈಷಿಗಳು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾಂಗ್ರೆಸ್ ಮುಖಂಡ ಸುಂಡಹಳ್ಳಿ ಮಂಜುನಾಥ್ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ