ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾಗಿದ್ದ
ಕಾಂ. ಜಿ.ಸಿ.ಬಯ್ಯಾರೆಡ್ಡಿ ಅವರು ಇಂದು ಮುಂಜಾನೆ 3 ಗಂಟೆಗೆ ಬೆಂಗಳೂರು ಜಯನಗರ 3ನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಸಿಪಿಐ(ಎಂ) ಪಕ್ಷದ ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಕೆಪಿಆರ್’ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




