ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರು ನಿಧನರಾಗಿದ್ದಾರೆ.
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ.
ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಪ್ರೊ.ಅಸ್ಸಾದಿ ಪ್ರಸಿದ್ದರಾಗಿದ್ದರು.
ಅವರು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಗಳು (ಹಂಗಾಮಿ),ರಾಯಚೂರು ವಿವಿಯ ಮಾಜಿ ವಿಶೇಷಾಧಿಕಾರಿಗಳು,ರಾಜಕೀಯ ತಜ್ಞರು, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಹಿರಿಯ ಪ್ರಾಧ್ಯಾಪಕರಾಗಿದ್ದರು.




