ಮಂಡ್ಯ ತಾಲ್ಲೂಕಿನ ಮಂಡ್ಯ ತಾಲೂಕಿನ ಕೆರಗೋಡು ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜ.5ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಕಚೇರಿ ಉದ್ಘಾಟನೆ ಮಾಡುವರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉಪಸ್ಥಿತರಿರುವರು. ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು.




