ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ಜ.9ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಗ್ರಾಮಾಂತರ ವ್ಯಾಪ್ತಿಯ ಹನಕೆರೆ ಗ್ರಾಮದಿಂದ ಇಂಡವಾಳು ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ ಸೇರುವ ಸರ್ವಿಸ್ ರಸ್ತೆಯಲ್ಲಿ ಆಗುತ್ತಿರುವ ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಉನ್ನತ ಅಧಿಕಾರಿಗಳೊಂದಿಗೆ ರಸ್ತೆ ಪರೀಕ್ಷಣೆ ಮಾಡಲಿದ್ದಾರೆ.
ಇತ್ತೀಚೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹಲವು ಅಪಘಾತಗಳು ಸಂಭವಿಸಿ ಸಾಕಷ್ಟು ಸಾವು ನೋವುಗಳಾಗಿರುವ ಹಿನ್ನೆಲೆಯಲ್ಲಿ ಶಾಸಕ ಗಣಿಗ ರವಿಕುಮಾರ್ ಉನ್ನತ ಅಧಿಕಾರಿಗಳೊಂದಿಗೆ ರಸ್ತೆ ಪರೀಕ್ಷಣೆ ನಡೆಸಲಿದ್ದು,ಈ ಸಂದರ್ಭದಲ್ಲಿ ಅಪಾಯಕಾರಿ ರಸ್ತೆ ಡುಬ್ಬಗಳನ್ನು ತೆರವುಗೊಳಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ.




