ಶೀಘ್ರದಲ್ಲೇ ನೂತನ ನ್ಯಾಯಾಲಯ ಕಟ್ಟಡವನ್ನು ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ ಹಾಗೂ ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರೇಗೌಡರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ದಿನಚರಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಸ್ಯೆಯ ನಡುವೆ ನ್ಯಾಯಾಲಯದ ಕಟ್ಟಡದ ಗೊಂದಲ ಮುಗಿದಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ ಸದ್ಯದಲ್ಲೇ ನ್ಯಾಯಾಲಯದ ಕಟ್ಟಡದ ಗುದ್ದಲಿಪೂಜೆ ನೆರವೇರಿಲಿದೆ ಎಂದರು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೃಂಗೇಶ್, ವಕೀಲರ ಪರಿಷತ್ತು ಅಧ್ಯಕ್ಷ ವಿಶಾಲ್ ರಘು, ವಕೀಲರ ಸಂಘದ ಅಧ್ಯಕ್ಷ ಸುಂದರ್, ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಂದ್ರ, ನ್ಯಾ. ಸಚಿನ್ ಕುಮಾರ್ ಶಿವಪೂಜಿ, ನ್ಯಾ.ಕಾವ್ಯಶ್ರೀ ಸೇರಿದಂತೆ ಹಲವರು ಇದ್ದರು.




