ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಮಳವಳ್ಳಿ ತಾಲೂಕಿನ ಪಂಡಿತನಹಳ್ಳಿ ಸರ್ಕಲ್ ನಲ್ಲಿ ನಡೆದಿದೆ.
ಮಂಚನಹಳ್ಳಿಯಿಂದ ಮಳವಳ್ಳಿಗೆ ಬೈಕಿನಲ್ಲಿ ಹೋಗುತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ಮಂಚನಹಳ್ಳಿ ಗ್ರಾಮದ ನಾಗಸ್ವಾಮಿ (45) ಹಾಗೂ ದೊಡ್ಡಮಾದಯ್ಯ(65) ಸಾವಿಗೀಡಾಗಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




