Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜ.11ರಂದು ಜಿಲ್ಲಾ ಸೌಹಾರ್ದ ಸಹಕಾರಿ ಸಮ್ಮೇಳನ

ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಉದ್ಘಾಟನೆ ಮತ್ತು ಜಿಲ್ಲಾ ಸೌಹಾರ್ದ ಸಹಕಾರಿ ಸಮ್ಮೇಳನವನ್ನು ಜನವರಿ ೧೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಬಿ.ಟಿ.ಗುರುರಾಜ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೩೨ ಸೌಹಾರ್ದ ಸಹಕಾರ ಸಂಸ್ಥೆಗಳು ನೊಂದಣಿಯಾಗಿ ಯಶಸ್ವಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲಾ ಸಹಕಾರ ಸಂಸ್ಥೆಗಳು ಒಟ್ಟುಗೂಡಿ ಜಿಲ್ಲಾ ಸೌಹಾರ್ದ ಸಹಕಾರಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆಶಯ ನುಡಿಗಳನ್ನಾಡಲಿದ್ದಾರೆ. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಅಧ್ಯಕ್ಷ ಜಿ.ನಂಜನಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು, ಶಾಸಕ ರವಿಕುಮಾರ್‌ಗೌಡ ಅವರು ಕ್ಯಾಲೆಂಡರ್ ಬಿಡುಗಡೆ ಮಾಡುವರು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸಹಕಾರಿಗಳಿಗೆ ಸನ್ಮಾನ ಮಾಡುವರು ಎಂದರು.

ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ನಾಗಭೂಷಣ್ ವಿಮೆ ಅನುಷ್ಠಾನ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಬಿ.ಟಿ.ಗುರುರಾಜ್ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕರಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಹಣ್ಯರು ಭಾಗವಹಿಸಲಿದದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಸ್.ಸಿದ್ದಲಿಂಗು, ನಿರ್ದೇಶಕರುಗಳಾದ ಎ.ಸಿ.ರಮೇಶ್, ವೆಂಕಟೇಶ್‌ಗೌಡ, ರಮೇಶ್, ವಿ.ದೊರೆಸ್ವಾಮಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ