ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಕ್ಕೆ ನಗರದ ಸಂತ ಜೋಸೆಫ್ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಆಯ್ಕೆಯಾಗಿದ್ದಾರೆ.
ಮಂಡ್ಯ ನಗರದ ಸಂತ ಜೋಸೆಫ್ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ. ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ಅವರು ಗುರುದೇವ ಲಲಿತಕಲಾ ಅಕಾಡೆಮಿಯ ಡಾ.ಚೇತನ ರಾಧಾಕೃಷ್ಣ ಅವರ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.




