Friday, November 20, 2026

ಪ್ರಾಯೋಗಿಕ ಆವೃತ್ತಿ

ಸಂಕ್ರಾಂತಿಗೆ ಮಳೆಯ ಸ್ವಾಗತ ; ಹವಾಮಾನ ಇಲಾಖೆ ಮುನ್ಸೂಚನೆ

ಹೊಸವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ಹಳೇ ಮೈಸೂರು ಭಾಗದ ವಿವಿಧ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ 2 ದಿನಗಳ ಕಾಲ ಹಗುರವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಕ್ರಾಂತಿ ಹಬ್ಬದ ದಿನವಾದ ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ ಎಂದು ಹೇಳಿದೆ.

ಅಂತೆಯೇ ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಪ್ರಮುಖವಾಗಿ ಜನವರಿ 13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಹೆಚ್ಚು. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು ಎಂದು ಹೇಳಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ