ಸ್ವಾಮಿ ವಿವೇಕಾನಂದ ಅವರು ಪ್ರತಿಯೊಬ್ಬ ಮನುಷ್ಯನಿಗೆ ಪ್ರೇರಣೆಯಾಗಿದ್ದು, ಅವರ ಸಂದೇಶಗಳು ಇವತ್ತಿಗೂ ಸಹ ಸಮಾಜಕ್ಕೆ ಮಾದರಿಯಾಗಿದೆ ಮೈಸೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜೇಗೌಡ ಬಣ್ಣಿಸಿದರು.
ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕರ್ನಾಟಕ ಸಂಘದ ಆವರಣದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆದ ಹತ್ತನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ, ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಕಾವ್ಯ ಕೌಸ್ತುಭ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿವೇಕಾನಂದ ಅವರು ಹಾಡು ಮುಟ್ಟದ ಸೊಪ್ಪಿಲ್ಲ, ಸಾಧನೆಗೈದ ಕ್ಷೇತ್ರ ಇಲ್ಲ ಎಂಬಂತೆ ದುಡಿದವರು, ಅವರಿಂದ ಸಮಾಜಕ್ಕೆ ಹಲವು ಸಹಾಯವಾಗಿದೆ. ಅಂತಹ ವ್ಯಕ್ತಿ ನಮ್ಮನ್ನ ಬಹು ಬೇಗ ಅಗಲಿದ್ದು ನಿಕ್ಕಲ್ ದುರಂತ ಎಂದು ವಿಷಾದಿಸಿದರು.
ಬಹು ಸಂಸ್ಕೃತಿಯ ರಾಷ್ಟ್ರವಾದ ಭಾರತವು ವಿವಿಧತೆಯಲ್ಲಿ ಏಕತೆಯ ದೇಶವಾಗಿದ್ದು, ಈ ದೇಶ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ನಾವೇನು ಕೊಟ್ಟಿದ್ದೇವೆ ಎನ್ನುವುದಷ್ಟೇ ಮುಖ್ಯ ಎಂದರು.
ಹಿರಿಯ ಸಾಹಿತಿ ಸತೀಶ್ ಜವರೇಗೌಡ ಮಾತನಾಡಿ, ಮಾತನಾಡಿ, ಮಂಡ್ಯ ಜಿಲ್ಲೆಯಂತಹ ಕನ್ನಡ ಹೆಚ್ಚು ಮಾತನಾಡುವ ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಸಾಹಿತ್ಯ ಉಳಿಸಿ, ಬೆಳೆಸುವಂತಹ ಇಂತಹ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸ ಯುವಕರ ಮೇಲಿದೆ. ಇಂದಿನ ಯುವ ಪೀಳಿಗೆ ಆಂಗ್ಲ ಭಾಷೆಗೆ ಜೋತು ಬಿದ್ದಿದ್ದಾರೆ. ಆಂಗ್ಲ ಭಾಷೆಯನ್ನು ಕಲಿಕೆಗೆ ಮೀಸಲಿಟ್ಟು, ಕನ್ನಡವನ್ನು ಹೆಚ್ಚು ಬೆಳೆಸುವ ಮೂಲಕ ಕನ್ನಡ ಕಟ್ಟುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಸಮ್ಮೇಳನಾಧ್ಯಕ್ಷ ಡಾ.ಸಿ.ಮರಯ್ಯ ಮಾತನಾಡಿ, ಅನ್ಯ ಭಾಷೆಗಳ ದಬ್ಬಾಳಿಕೆಯಿಂದ ಕನ್ನಡವನ್ನು ರಕ್ಷಿಸಿಕೊಂಡು ಭಾಷಾ ಬೆಳವಣಿಗೆಗೆ ನಾಂದಿಯಾಡಬೇಕು. ಕರ್ನಾಟಕದಲ್ಲಿ ಕನ್ನಡವನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವುದಲ್ಲದೇ ದೇಶದಲ್ಲಿ ಕನ್ನಡ ಭಾಷೆ ಚಿರಸ್ಥಾಯಿಯಾಗಿ ಉಳಿದುಕೊಳ್ಳುವಂತೆ ನೋಡಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ತಿಬ್ಬನಹಳ್ಳಿ ರಮೇಶ್, ಎಚ್.ಆರ್.ಧನಂಜಯ, ಕೆ.ಪಿ.ವೀರಪ್ಪ, ನಿರ್ಮಲಾ, ಶಿವಕುಮಾರ್, ಚಂದ್ರು, ಮಂಜುನಾಥ್, ಚಂದ್ರಕಲಾ, ದೇವರಾಜು, ಪುಟ್ಟಸ್ವಾಮಿ, ಶ್ರೀನಿವಾಸ್, ಡಾ.ಲಾವಣ್ಯ, ಪದ್ಮಶ್ರೀ, ಹನುಮಂತಪ್ಪ, ಸಿದ್ದಪ್ಪ ಸೇರಿದಂತೆ ಹಲವು ಗಣ್ಯರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಸಾಹಿತಿ ಡಾ.ಬಿ.ಸಿ.ವಿಜಯ್ಕುಮಾರ್, ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ, ಸಮಾಜ ಸೇವಕರಾದ ಚೈತ್ರ ಶಶಿಧರ್ಗೌಡ, ಡಾ.ಎಲ್.ಜಿ.ಮಂಜುನಾಥ್, ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ಕನ್ನಡ ಶಫಿ, ಪಾಂಡವಪುರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಚಲುವೇಗೌಡ, ಡಾ.ಜೀಶಂಪ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ, ಕಾರ್ಯಾಧ್ಯಕ್ಷ ರಾಗಿಮುದ್ದನಹಳ್ಳಿ ನಾಗೇಶ್, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಣ್ಣ, ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಹೊಸಹಳ್ಳಿ ಹಾಗೂ ಸಂಘಟನಾ ಕಾರ್ಯದರ್ಶಿ ಮಂಡ್ಯ ಯಶು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




