Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷ ಪಟ್ಟ ನೀಡಲು ಒಲವು ಹೊಂದಿದ್ದಾರೆಂದು ತಿಳಿದು ಬಂದಿದೆ.

ನಿನ್ನೆ ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಸಂಘಟನೆಗೆ ಬಲ ತುಂಬುವ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ಮೂಲಕ ಮುಂದಿನ ಏಪ್ರಿಲ್‌ಗೆ ನೂತನ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ.

ಪಕ್ಷದ ಹಾಲಿ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವರೂ ಆಗಿರುವ ಎಚ್‌.ಡಿ. ಕುಮಾರಸ್ವಾಮಿ, ”ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚೆಯೇ ಆಗಿಲ್ಲ,” ಎಂದರು. ಜೆಡಿಎಸ್‌ ಮೂಲಗಳ ಪ್ರಕಾರ, ನಿಖಿಲ್‌ ಅವರಿಗೆ ಪಟ್ಟ ಕಟ್ಟುವ ಬಗ್ಗೆ ಪಕ್ಷದ ಶಾಸಕರು, ಮುಖಂಡರ ಒಂದು ವಲಯದಲ್ಲಿ ಒಪ್ಪಿಗೆಯಿದೆ. ದೇವೇಗೌಡರ ಕುಟುಂಬದವರ ಕೈಯ್ಯಲ್ಲೇ ಪಕ್ಷದ ಚುಕ್ಕಾಣಿಯಿದ್ದರೆ ಸೂಕ್ತ ಎಂಬ ಭಾವನೆ ಹಲವರಲ್ಲಿದೆ. ಆದರೆ, ಈ ಗುಟ್ಟನ್ನು ಕುಮಾರಸ್ವಾಮಿ ಬಿಟ್ಟು ಕೊಟ್ಟಿಲ್ಲ ಎಂದು ತಿಳಿದು ಬಂದಿದೆ.

”ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ ಕುಮಾರಸ್ವಾಮಿ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ