ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮದ ವೆಂಕಟೇಶ್ವರ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಜ.16ರಂದು ಬೆಳಿಗ್ಗೆ 10 ಗಂಟೆಯಿಂದ ಜನತಾ ದರ್ಶನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಇ-ಸ್ವತ್ತು ಆಂದೋಲನಕ್ಕೂ ಚಾಲನೆ ನೀಡಲಾಗುವುದು, ಅಲ್ಲದೇ ಜನತಾ ದರ್ಶನದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸುವುದರಿಂದ ಸುತ್ತಮುತ್ತ ಗ್ರಾಮಸ್ಥರು ಆಗಮಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಶಾಸಕ ರವಿಕುಮಾರ್ ಮನವಿ ಮಾಡಿದ್ದಾರೆ.




