Friday, November 20, 2026

ಪ್ರಾಯೋಗಿಕ ಆವೃತ್ತಿ

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ| ಸಂತ್ರಸ್ಥರಿಗೆ 3 ಹಸುಗಳನ್ನು ಕೊಡುಗೆಯಾಗಿ ನೀಡಿದ ಸಚಿವ ಜಮೀರ್ ಅಹಮದ್

ಬೆಂಗಳೂರು ಮಹಾನಗರದ ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ನಡೆದ ಬೆನ್ನಲೇ, ವಸತಿ ಸಚಿವ ಜಮೀರ್ ಅಹ್ಮದ್ ಅವರು ತಮ್ಮ ಸ್ವಂತ ಹಣದಿಂದ 3 ಹಸುಗಳನ್ನು ಖರೀದಿಸಿ ಸಂತ್ರಸ್ಥರಿಗೆ ಕೊಡುಗೆಯಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹಸುವಿನ ಮಾಲೀಕರಾದ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹ್ಮದ್ 3 ಲಕ್ಷ ವೆಚ್ಚದಲ್ಲಿ ಮೂರು ಹಸುಗಳನ್ನು ಖರೀದಿಸಿ ನೀಡಿದರು.

ಈ ಪ್ರಕರಣ ನಡೆದ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್, ಸಂತ್ರಸ್ಥರಿಗೆ ಹಸುಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಇದೇ ವೇಳೆ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ಕ್ಷಮೆ ಕೋರುವುದಾಗಿ ತಿಳಿಸಿದರಲ್ಲದೇ, ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ನಾವು ಶಾಸಕರ ಜೊತೆಗಿದ್ದೇವೆ ಎಂದು ಹೇಳಿದರು.

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್ ಹಾಗೂ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ