Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಇಂದು ಮಂಡ್ಯ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ‌ ಸಭಾಂಗಣದಲ್ಲಿ ನಡೆಯಿತು.

ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ‌ ಪ್ರಗತಿಯನ್ನು ತಾಲ್ಲೂಕುವಾರು ಪರಿಶೀಲಿಸಿದ ಅವರು, ಐ.ಟಿ ಹಾಗೂ ಜಿ.ಎಸ್.ಟಿ ಪಾವತಿಗೆ ಸಂಬಂಧಿಸಿದಂತೆ ಗೃಹ ಲಕ್ಷ್ಮಿ ಯೋಜನೆಯಡಿ ಕೆಲವು ಫಲಾನುಭವಿಗಳಿಗೆ ಹಣ ಪಾವತಿಯಲ್ಲಿ ತೊಂದರೆಯಾಗಿದ್ದಲ್ಲಿ ರಾಜ್ಯ ಮಟ್ಟಕ್ಕೆ ವಿವರ ಕಳುಹಿಸಿಕೊಡುವ ವ್ಯವಸ್ಥೆಯಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಇಂಜಿನಿಯರಿಂಗ್ ಹಾಗೂ ಪ್ರಥಮ ದರ್ಜೆ ಕಾಲೇಜುಗಳಿಗೆ ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ಈ ವರ್ಷ ಉತ್ತೀರ್ಣರಾದ ಸುಮಾರು 400 ಜನರನ್ನು ನೊಂದಣಿ ಮಾಡಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಮಿತಿಯನ್ನು ರಚಿಸಿ ಸಭೆ ನಡೆಸಲಾಗಿದೆ ಎಂದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ರಾಜೇಂದ್ರ ಎಸ್.ಹೆಚ್, ಪ್ರಶಾಂತ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್ ಎಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ