Sunday, November 22, 2026

ಪ್ರಾಯೋಗಿಕ ಆವೃತ್ತಿ

ಸಿ.ಟಿ. ರವಿ ಅವಾಚ್ಯ ಪದ ಬಳಕೆ | ಅಸಲಿ ಆಡಿಯೋ ಸಿಐಡಿಗೆ ಲಭ್ಯ

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ ಟಿ ರವಿ ವಿರುದ್ಧ ದಾಖಲಾಗಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಬಹುಮುಖ್ಯವಾದ ಅಸಲಿ ಆಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ಸಿ ಟಿ ರವಿ ಅವರು ಏಳು ಬಾರಿ ಹೆಬ್ಬಾಳರ್ ಅವರಿಗೆ ನಿಂದಿಸಿರುವುದು ಕೇಳಿಬರುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ರವಿ ನಿಂದನೆ ಕುರಿತು ಖಾಸಗಿ ವಾಹಿನಿಗಳಲ್ಲಿ ವಿಡಿಯೋ ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸಭಾಪತಿ ಹೇಳುತ್ತಿದ್ದರು. ಆದರೆ ಸದನದಲ್ಲಿನ ಸರ್ಕಾರಿ ಟಿವಿಯಲ್ಲಿನ ವಿಡಿಯೋವೇ ಇದೀಗ ಸಿಕ್ಕಿದೆ. ಈ ವಿಡಿಯೋ ಸಿ.ಟಿ.ರವಿ ಅವರಿಗೆ ಕಂಟಕವಾಗಬಹುದಾದ ಸಾಧ್ಯತೆಯಿದೆ.

ಇದೇ ಕಾರಣಕ್ಕೆ ಅವರು ಧ್ವನಿ ಪರೀಕ್ಷೆಗೊಳಗಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ತಾನು ಸಚಿವೆಯನ್ನು ಉದ್ದೇಶಿಸಿ ‘ಪ್ರಸ್ಟೇಟ್ ಎಂದು ಹೇಳಿದ್ದೇನೆಯೇ ಹೊರತು ನಿಂದಿಸಿಲ್ಲ ಎಂದು ವಾದಿಸಿದ್ದ ರವಿ ಅವರು, ತಾನು ನಿಂದಿಸಿದ್ದಕ್ಕೆ ಅಸಲಿ ವಿಡಿಯೋ ಇಲ್ಲ ಎಂದು ಹೇಳಿದ್ದರು.

ಇನ್ನೊಂದೆಡೆ ರವಿ ಅವರು ನಿಂದಿಸಿದ ಇಲ್ಲವೆಂದು ವಿಧಾನ ಪರಿಷತ್ ಸಭಾವತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು. ಈಗ ಅಸಲಿ ವಿಡಿಯೋ ಸಿಐಡಿಗೆ ಲಭ್ಯವಾಗಿರುವುದು ಭಾರೀ ಕುತೂಹಲ ಕೆರಳಿಸಿದೆ.

ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆ‌ರ್) ಸಿಐಡಿ ಮನವಿ ಮಾಡಿತ್ತು. ಈ ಕೋರಿಕೆಗೆ ಸಮ್ಮತಿಸಿದ ಡಿಎಪಿಆರ್ ಸಿಐಡಿಗೆ ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವಿಡಿಯೋ ಸಲ್ಲಿಸಿದೆ. ಇದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಿಐಡಿ ರವಾನಿಸಿದ್ದು, ಆ ವಿಡಿಯೋದಲ್ಲಿ ಕೇಳಿ ಬರುವ ಧ್ವನಿ ರವಿ ಅವರದ್ದೇ, ಅಲ್ಲದೇ ಎಂದು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸಿಐಡಿ ಅಧಿಕಾರಿಗಳು ಧ್ವನಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

7 ಬಾರಿ ನಿಂದಿಸಿದ್ದ ರವಿ ಬೆಳಗಾವಿ ಅಧಿವೇಶನದ ವೇಳೆ ಡಿ.19 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರಿಗೆ ಅಸಂಸದೀಯ ಪದ ಬಳಸಿ ರವಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಿರೇ ಬಾಗೆವಾಡಿ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆದಿದ್ದ ಘಟನಾವಳಿ ಕುರಿತ ವಿಡಿಯೋ ನೀಡುವಂತೆ ಡಿಎಪಿಆರ್‌ಗೆ ಪತ್ರ ಬರೆದಿತ್ತು ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆರ್ ಇಲಾಖೆ ವಿಡಿಯೋ ಸಲ್ಲಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ