ಮಂಡ್ಯ ತಾಲ್ಲೂಕಿನ ಬೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಮೈ ಭಾರತ್ ಮಂಡ್ಯ ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶಯದಲ್ಲಿ ಇಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಶಾಲೆಯ ಹಿರಿಯ ಶಿಕ್ಷಕಿ ರೇಣುಕಾ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.ಸರ್ಕಾರಿ ಪ್ರೌಢಶಾಲೆ ಬೇಲೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಬೇಲೂರಿನ ಪ್ರಮುಖ ಬೀದಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಸಂದೇಶಗಳನ್ನು ಸಾರುತ್ತಾ ಪ್ರಮುಖ ಬೀದಿಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.. ಕಾರ್ಯಕ್ರಮವನ್ನ ಗೈಡ್ ಕ್ಯಾಪ್ಟನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಉಷಾರಾಣಿ ಆಯೋಜನೆ ಮಾಡಿದ್ದರು..
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಜ್ಯೋತಿ, ಚಂದ್ರಕಲಾ, ದೀಪಕ್ ಹಾಗೂ ಯಶವಂತ ಹಾಜರಿದ್ದರು.




