Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆ ; ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮಂಡ್ಯದ ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸಾಲಗಾರರಲ್ಲದ ಕ್ಷೇತ್ರದಿಂದ ಬೇಲೂರು ಸೋಮಶೇಖರ್, ಸಾಲಗಾರರ ಕ್ಷೇತ್ರದಿಂದ ಹೆಚ್.ಸಿ ಶಿವಲಿಂಗೇಗೌಡ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೇಲೂರು ಸೋಮಶೇಖರ್, ಕಳೆದ 5 ವರ್ಷದ ಅವಧಿಯಲ್ಲಿ ಬ್ಯಾಂಕಿಗೆ ಸುಸಜ್ಜಿತವಾದ ಆಡಳಿತ ಭವನ ಮತ್ತು ಸಭಾಂಗಣ ಹಾಗೂ ಹಳೆ ಕಟ್ಟಡದ ದುರಸ್ತಿ ಕಾಮಗಾರಿ ಸೇರಿದಂತೆ ಬ್ಯಾಂಕಿಗೆ 19 ಕೋಟಿ ವಸೂಲಾತಿಯಲ್ಲಿ ಸುಮಾರು 16 ಕೋಟಿ ವಸೂಲಿ ಮಾಡಿದ್ದೇವೆ, ಪ್ರತಿಯೊಬ್ಬ ಷೇರುದಾರರು ನಮ್ಮ 14 ಜನ ಅಭ್ಯರ್ಥಿಗಳನ್ನು ಆಶೀರ್ವದಿಸಿ ಗೆಲ್ಲಿಸಿ ಕೊಡಬೇಕೆಂದು ಮನವಿ ಮಾಡಿದರು.

ಹೆಚ್.ಸಿ ಶಿವಲಿಂಗೇಗೌಡ ಮಾತನಾಡಿ, ನಾನು 3ನೇ ಬಾರಿಗೆ ಸ್ಪರ್ಧಿಸುತ್ತಿದ್ದು, ಶಾಸಕ ರವಿಕುಮಾರ್ ಗಣಿಗ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ 14 ಜನ ಸ್ಪರ್ಧೆ ಮಾಡುತ್ತಿದ್ದು, ಬ್ಯಾಂಕಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ