Friday, November 20, 2026

ಪ್ರಾಯೋಗಿಕ ಆವೃತ್ತಿ

ದೆಹಲಿಯ ಗಣರಾಜ್ಯೋತ್ಸವಕ್ಕೆ ಮಂಡ್ಯದ ವಿದ್ಯಾರ್ಥಿನಿ

ಜ.26 ರಂದು ದೆಹಲಿಯಲ್ಲಿ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಡ್ಯ ನಗರದ ಪಿಇಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿನಿ
ತೇಜಸ್ವಿನಿ ಎಚ್.ಬಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರತಿನಿಧಿಯಾಗಿ ಭಾಗವಹಿಸಲಿರುವ ವಿದ್ಯಾರ್ಥಿನಿ ಕು.ತೇಜಸ್ವಿನಿ ಎಚ್.ಬಿ, ಮಂಡ್ಯದ ಹಾಗೂ ಕಾಲೇಜಿನ ಕೀರ್ತಿಯನ್ನು ಎತ್ತಿಹಿಡಿದಿದ್ದಾರೆ.

ತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ