Saturday, November 21, 2026

ಪ್ರಾಯೋಗಿಕ ಆವೃತ್ತಿ

ಮನ್ಮುಲ್ ನಿರ್ದೇಶಕರ ಚುನಾವಣೆ | ಶಿವಕುಮಾರ್, ಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಫೆ. ೨ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಹಾಲಿ ಮನ್‌ಮುಲ್ ನಿರ್ದೇಶಕ ಯು.ಸಿ. ಶಿವಕುಮಾರ್ (ಶಿವಪ್ಪ), ಬಿಜೆಪಿ ಬೆಂಬಲಿತ ಎಸ್.ಪಿ. ಸ್ವಾಮಿ (ಸಾದೊಳಲು) ಶನಿವಾರ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನಾಲ್ಕೈದು  ತಿಂಗಳ ಪ್ರೋತ್ಸಾಹ ಧನ ಬಾಕಿ ಉಳಿದಿದ್ದು, ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಕಳೆದ ಎರಡು ಬಾರಿ ಆಡಳಿತ ಮಂಡಳಿಯಲ್ಲಿ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಸ್ವತಃ ರೈತನಾಗಿ ಹಾಲು ಉತ್ಪಾದಕರ ಸಂಕಷ್ಟವನ್ನೂ ಅರಿತಿದ್ದೇನೆ. ಮುಂದಿನ ದಿನಗಳಲ್ಲಿ ಉತ್ಪಾದಕರಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನೂ ಪ್ರಾಮಾಣಿಕವಾಗಿ ಕೊಡಿಸಿಕೊಡುವಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಎಸ್.ಪಿ.ಸ್ವಾಮಿ ಮಾತನಾಡಿ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅತ್ಯುತ್ತಮವಾಗಿ ಕಾರ‍್ಯನಿರ್ವಹಿಸುತ್ತಿದ್ದು, ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಹಾಲಿನ ಸಂಗ್ರಹವಾಗುತ್ತಿದೆ. ಇದನ್ನು ಸಂಸ್ಕರಿಸಿ ಮಾರುಕಟ್ಟೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಕೇಂದ್ರ ಸರ್ಕಾರ ಮತ್ತು ಸಚಿವರು ದೆಹಲಿಯಲ್ಲಿ ಮಾರುಕಟ್ಟೆಯಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಪ್ರತಿನಿತ್ಯ ೧ ಲಕ್ಷ ಹಾಲು ಮಾರಾಟದ ಗುರಿ ಇಟ್ಟುಕೊಂಡಿದ್ದೇವೆ. ಆದರೆ ಸಣ್ಣ ಪುಟ್ಟ ಸಮಸ್ಯೆಗಳೂ ಇವೆ. ಅವುಗಳ ಪರಿಹಾರಕ್ಕೆ ನಮ್ಮ ವ್ಯವಸ್ಥಾಪಕ ನಿರ್ದೇಶಕರು, ಅ?ಕಾರಿಗಳು ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮದಾದರೂ, ಸ್ಥಳೀಯವಾಗಿ ಅಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಅದರಿಂದಾಗಿ ನಮಗೆ ತೊಡಕುಂಟಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ