Friday, November 20, 2026

ಪ್ರಾಯೋಗಿಕ ಆವೃತ್ತಿ

ಮುಡಾ ಕುರಿತ ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಕುರಿತ ಜಾರಿ ನಿರ್ದೇಶನಾಲಯದ (ಇಡಿ)ಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು (ಜ.20) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ” ಎಂದರು.

ಹಣ ದುರುಪಯೋಗದ ಪ್ರಶ್ನೆ ಇಲ್ಲ

ಆಪಾದಿತ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣಗಳು ಮತ್ತು ರಾಜ್ಯದ ತೆರಿಗೆ ಹಣದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದು ತಿಳಿಸಿದರು.

ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತಿಯ ಕ್ರಮ

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬುವುದರ ಬಗ್ಗೆ ಮಾತನಾಡಿ, “ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ