ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹೇಮಾವತಿ ಅವಿರೋಧವಾಗಿ ಆಯ್ಕೆಯಾದರು.
ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಗ್ರಾಮ ಪಂಚಾಯಿತಿ ಆವರಣದಲ್ಲಿ ಚುನಾವಣೆ ನಿಗದಿಯಾಗಿತ್ತು. 25 ಮಂದಿ ಸದಸ್ಯರ ಪೈಕಿ 15 ಮಂದಿ ಸದಸ್ಯ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದರು. ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಹೇಮಾವತಿಯವರು ಮಾತ್ರ ನಾಮಪತ್ರ ಸಲ್ಲಿಸಿದ್ದರು, ಈ ಹಿನ್ನೆಲೆಯಲ್ಲಿ ಹೇಮಾವತಿಯವರನ್ನು ಚುನಾವಣಾಧಿಕಾರಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆ ಮಾಡಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇವರಾಜು ಮಾತನಾಡಿ, ಎಲ್ಲಾ ಸದಸ್ಯರುಗಳ ಸಹಕಾರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೇಮಾವತಿರವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ , ನೂತನ ಅಧ್ಯಕ್ಷರು ಪಂಚಾಯಿತಿ ಅಭಿವೃದ್ಧಿಗೆ ಎಲ್ಲಾ ಸದಸ್ಯರ ವಿಶ್ವಾಸಗಳಿಸಿ ಕೆಲಸ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಮಾದನಾಯಕ್, ವೆಂಕಟೇಶ್, ಪರಮೇಶ್, ನಾಗೇಂದ್ರ, ವಿಜಯಕುಮಾರ್, ಮಂಗಳಗೌರಿ, ಶಶಿಕಲಾ, ರೇಖಾ, ಮಹಾಲಕ್ಷ್ಮಿ, ಶಶಿಕಲಾ, ಕುಮಾರಿ, ಗಂಗಾ, ಕೌಸರ್ ಜಾನ್,ಭಾರತಿ, ನಂಜುಂಡಸ್ವಾಮಿ ಕಲ್ಕುಣಿ ಸೇರಿದಂತೆ ಹಲವರು ಇದ್ದರು.




