Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೆಡಿಎಸ್ ಕಾರ್ಯಕರ್ತರಿಂದ ನಿಖಿಲ್ ಕುಮಾರಸ್ವಾಮಿ ಜನ್ಮದಿನ ಆಚರಣೆ

ಮಂಡ್ಯ ನಗರದ ವಿದ್ಯಾಗಣಪತಿ ದೇವಾಲಯದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ 37ನೇ ಜನ್ಮ ದಿನಾಚರಣೆಯ ಅಂಗವಾಗಿ ನೂರಾರು ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್. ರಾಮಚಂದ್ರು ಮಾತನಾಡಿ, ಜೆಡಿಎಸ್ ರಾಜ್ಯ ಯುವಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುತ್ತಾ ಬಲವರ್ಧನೆ ಮಾಡುತ್ತಿದ್ದಾರೆ. ಅವರಿಗೆ ದೇವರು ಆಯಸ್ಸು, ಆರೋಗ್ಯ ನೀಡಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶಕ್ತಿ ಕೊಡಲೆಂದು ಪ್ರಾರ್ಥಿಸುತ್ತೇನೆ, ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದಲ್ಲಿರುವ ಬಡವರು, ರೈತರ ಪರವಾಗಿ ಸೇವೆ ಸಲ್ಲಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಅವರ ಸೇವೆ ಶ್ಲಾಘನೀಯ ಅಂದರು.

ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್‌ ಮಾತನಾಡಿ, ನಿಖಿಲ್ ಕುಮಾರಸ್ವಾಮಿ ರವರು ಕರೆ ಕೊಟ್ಟಂತೆ ಸರಳವಾಗಿ ಅವರ ಹುಟ್ಟುಹಬ್ಬವನ್ನು ಇಂದು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲಿ ದೇವರು ಅವರಿಗೆ ಆಯಸ್ಸು, ಆರೋಗ್ಯ, ಅಧಿಕಾರ ಕೊಟ್ಟು ಕರುಣಿಸಲಿ. ಮುಂದಿನ ಬಾರಿ
ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುವ ಆಲೋಚನೆ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ನಗರಸಭೆ ಉಪಾಧ್ಯಕ್ಷ ಅರುಣ್ ಕುಮಾರ್,ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ, ಬಿ.ಆರ್.ಸುರೇಶ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ,ನಗರಸಭೆ ಸದಸ್ಯರಾದ ಮೀನಾಕ್ಷಿ ಪುಟ್ಟಸ್ವಾಮಿ, ನಾರಾಯಣ್, ಮುಖಂಡರಾದ ಪುಟ್ಟಸ್ವಾಮಿ,ರಾಕೇಶ್,ಜಯರಾಮು ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ