Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮಿಮ್ಸ್ ರೋಗಿಗಳಿಗೆ ಮೂಲಭೂತ ಸೌಕರ್ಯ ನೀಡಿ : ಡಾ. ಕುಮಾರ

ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಶೌಚಾಲಯಗಳು ಹಾಗೂ ನೀರಿನ ವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಇನ್ನೂ ಮುಂದೆ ರೋಗಿಗಳಿಗೆ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ಮಿಮ್ಸ್ ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸುಮಾರು 105 ಸ್ವಚ್ಚತಾ ಸಿಬ್ಬಂದಿಗಳನ್ನು ನೇಮಕ‌ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯ ಸ್ವಚ್ಛತಾ ಕೆಲಸಗಳನ್ನು ‌ಅವರು ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ಪ್ರತಿದಿನ ಮೇಲ್ವಿಚರಣೆ ನಡೆಸದೇ ಇದ್ದಲ್ಲಿ ಕೆಲಸಗಳು ಸುಸೂತ್ರವಾಗಿ ನಡರಯುವುದಿಲ್ಲ ಹಾಗೂ ಆಸ್ಪತ್ರೆಗೆ ಬರುವ ರೋಗಿಗಗಳು ತಮಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ ಎಂದು ದೂರು ಸಲ್ಲಿಸುತ್ತಾರೆ ಎಂದರು.

ಪರಿಶೀಲನೆಯ ಸಂದರ್ಭದಲ್ಲಿ ಕೆಲವು ಶೌಚಾಲಯಗಳ ಬಾಗಿಲು ಮುರಿದು ಹೋಗಿರುವುದು, ಸ್ವಚ್ಚತೆ ಇಲ್ಲದಿರುವುದು, ಸ್ನಾನ ಗೃಹದಲ್ಲಿ ಬಕೆಟ್ ಮಗ್ ಇಲ್ಲದಿರುವುದು, ಕೈ ತೊಳೆಯುವ ಸಿಂಕ್ ನೆಲ್ಲಿಗಳು ಮುರಿದು ಹೋಗಿರುವುದು ಕಂಡುಬಂದಿದೆ. ಇವುಗಳು ಸಣ್ಣ ಪುಟ್ಟ ಕೆಲಸಗಳಾಗಿರುತ್ತದೆ. ಅವುಗಳನ್ನು ಕಚೇರಿ ವೆಚ್ಚದಲ್ಲಿ ಸರಿಪಡಿಸಬಹುದು ಎಂದರು.

ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ವೀಲ್ ಚೇರ್ ಮೂಲಕ ರೋಗಿಗಳನ್ನು ಕರೆದುಕೊಂಡು ಹೋಗಲು 20 ವಾಡ್೯ ಬಾಯ್ ಗಳಿದ್ದಾರೆ. ಕೆಲವು ಸಂದರ್ಭದಲ್ಲಿ ಹೆಚ್ಚಿನ ರೋಗಿಗಳು ಬಂದಾಗ ಒಟ್ಟಿಗೆ ಕರೆದೊಯ್ಯುವ ಕೆಲಸ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ರೋಗಿಗಳೊಂದಿಗೆ ಸಹನೆಯಿಂದ ವರ್ತಿಸಿ ಕೆಲಸ ನಿರ್ವಹಿಸಲು ತಿಳಿಸಿ ಎಂದರು.

ಜೂನ್ ಮಾಹೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಸಭೆ ನಡೆಸಿದಾಗ 3 ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಕೆಲಸ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಇನ್ನೂ ಪೂರ್ಣಗೊಂಡಿರುವುದಿಲ್ಲ. ಫೆಬ್ರವರಿ ಅಂತ್ಯದೊಳಗೆ ಸಿವಿಲ್ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಸಿ.ಟಿ. ಸ್ಕ್ಯಾನ್, ಎಂ.ಆರ್.ಐ, ಅಲ್ಟ್ರ ಸೌಂಡ್, ಡಯಾಲಿಸಿಸ್, ಅಂಬೂಲೆನ್ಸ್, ಮಿಮ್ಸ್ ನಲ್ಲಿ ನಡೆಯುತ್ತಿರುವ ಕ್ರಿಟಿಕಲ್ ಕೇರ್ ಯುನಿಟ್, ಗ್ರಂಥಾಲಯ, ಆರೋಗ್ಯ ಧಾಮ, ಹೊರ ಗುತ್ತಿಗೆ ನೌಕರರಿಗೆ ಪಿ.ಎಫ್ ಪಾವತಿ ಸೇರಿದಂತೆ ವಿವಿಧ‌ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಸಿವಿಲ್ ಕಾಮಗಾರಿ ಪೂರ್ಣಗೊಂಡ ನಂತರ ಎಫ್.ಡಿ ಅವರು ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ನೀಡುತ್ತಾರೆ. ಬಂಕರ್ ಇನ್ಸಾಟಾಲ್ ಮಾಡಲು ಸುಮಾರು 3 ತಿಂಗಳು ಬೇಕಾಗುತ್ತದೆ ಎಂದು ಮಿಮ್ಸ್ ಡೀನ್ ಡಾ: ನರಸಿಂಹಸ್ವಾಮಿ ಪಿ ಅವರು ಮಾಹಿತಿ ನೀಡಿದರು.

ನಂತರ ಮಾತನಾಡಿದ ಅವರು ಮಿಮ್ಸ್ ನಲ್ಲಿ 10 ಸರ್ಜನ್ ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ದಿನ ಸುಮಾರು ಸರಾಸರಿ 36 ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಇಲ್ಲಿ ದೊರೆಯುವ ಸೌಲಭ್ಯಕ್ಕಾಗಿ ಖಾಸಗಿ ಆಸ್ಪತ್ರೆ ಸಂಪರ್ಕಿಸಿ ಎಂದು ರೋಗಿಗಳಿಗೆ ತಿಳಿಸುತ್ತಿಲ್ಲ ಎಂದರು.

ಸಭೆಯಲ್ಲಿ ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ: ಶಿವಕುಮಾರ್, ಅರ್.ಎಂ.ಒ ಡಾ; ದರ್ಶನ್ ಕುಮಾರ್, ಸಿ.ಎ.ಒ ಜಾನ್ಸನ್, ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ: ಹನುಮಂತ ಪ್ರಸಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ