Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾಧಿಕಾರಿಗೆ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ’

ರಾಜ್ಯ ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂದು ಪ್ರಶಸ್ತಿ ಪ್ರಕಟಿಸಿದೆ.

2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಮಂಡ್ಯ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ.

ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ