Friday, November 20, 2026

ಪ್ರಾಯೋಗಿಕ ಆವೃತ್ತಿ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ !

ರಾಜ್ಯ ರಾಜಕೀಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಕೆಸರೆರಾಚಾಟಕ್ಕೆ ಕಾರಣವಾಗಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಮತ್ತೊಂದೆಡೆ, ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ